Publish Date: Wed, 08 Feb 2023 (19:44 IST)
Updated Date: Wed, 08 Feb 2023 (20:09 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಎಸ್. ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಎಸ್.ಸೆಲ್ವಮಣಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.