ಸ್ಪೀಕರ್‌ ಯು.ಟಿ. ಖಾದರ್‌ ಬೆನ್ನಲ್ಲೇ ಸಿದ್ದರಾಮಯ್ಯಗೆ ಬೆದರಿಕೆ ಕರೆ: ಕ್ರಮಕ್ಕೆ ಪೊಲೀಸರಿಗೆ ಸಿಎಂ ಸೂಚನೆ

Sampriya
ಶುಕ್ರವಾರ, 2 ಮೇ 2025 (16:09 IST)
ಮಂಡ್ಯ: ವಿಧಾನಸಭಾಧ್ಯಕ್ಷ ಯು.ಟಿ .ಖಾದರ್ ಅವರಿಗೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಬೆದರಿಕೆ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನನಗೂ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿ, ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಸಿಎಂ ಹೇಳಿದರು. ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಕೊಲೆಗೀಡಾದ ಸುಹಾಸ್‌ ಶೆಟ್ಟಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿಲು ಸೂಚಿಸಿದ್ದೇನೆ. ಮನುಷ್ಯನ ಪ್ರಾಣ ಬಹಳ ಮುಖ್ಯ. ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕರಣಗಳನ್ನೇ ಹುಡುಕುತ್ತಾರೆ. ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ಮಂದಿ ಮೃತಪಟ್ಟರು. ಪ್ರಧಾನಿ ನರೇಂದ್ರ ಮೋದಿ ಅವರು ಆ ಸ್ಥಳಕ್ಕೆ ಭೇಟಿ ನೀಡಿದ್ದಾರೆಯೇ? ಪ್ರವಾಸಿಗರು ಸೇರುವ ಸ್ಥಳದಲ್ಲಿ ಪೊಲೀಸ್‌ ಆಗಲಿ, ಭದ್ರತಾ ಪಡೆಯವರನ್ನಾಗಲಿ ನಿಯೋಜಿಸಿರಲಿಲ್ಲ. ಇದು ಭದ್ರತಾ ವೈಫಲ್ಯವಲ್ಲವೇ? ಎಂದು ದೂರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ಮುಂದಿನ ಸುದ್ದಿ
Show comments