Select Your Language

Notifications

webdunia
webdunia
webdunia
webdunia

ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ

ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ
ಬೆಂಗಳೂರು , ಭಾನುವಾರ, 4 ಜೂನ್ 2023 (06:14 IST)
ಬೆಂಗಳೂರು : ಒಡಿಶಾದಲ್ಲಿ ನಡೆದ ರೈಲು ದುರಂತ ಹಿನ್ನೆಲೆಯಲ್ಲಿ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣ ದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
 
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿರುವ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಕೋಲ್ಕತ್ತಾ ಮುಂತಾದ ಕಡೆಗಳಿಗೆ ತೆರಳಬೇಕಿರುವ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರೆಲ್ಲರಿಗೂ ಊಟ, ತಿಂಡಿ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿಉರವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ತೆರಳಬೇಕಾಗಿದ್ದ ರೈಲುಗಳ ಪ್ರಯಾಣ ರದ್ದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿ ಮದುವೆಯಾಗಿದ್ದ ಸಬ್ ಇನ್ಸ್ಪೆಕ್ಟರ್ ಹೆಂಡತಿ ‌ಆತ್ಮಹತ್ಯೆ