Select Your Language

Notifications

webdunia
webdunia
webdunia
webdunia

ಗ್ರಾಮ ಒನ್ ಬಗ್ಗೆ ಪರಿಶೀಲನೆ ನಡೆಸಿದ ಸಿಎಂ

ಗ್ರಾಮ ಒನ್  ಬಗ್ಗೆ ಪರಿಶೀಲನೆ ನಡೆಸಿದ ಸಿಎಂ
ಬೆಂಗಳೂರು , ಶನಿವಾರ, 5 ಫೆಬ್ರವರಿ 2022 (18:34 IST)
ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಆಶಯದೊಂದಿಗೆ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರು ರಾಜ್ಯದ 12 ಜಿಲ್ಲೆಗಳಲ್ಲಿ 3026 ಗ್ರಾಮ ಒನ್ ಕೇಂದ್ರಗಳಿಗೆ ಚಾಲನೆ ನೀಡಿದ್ದರು. ಈ ಗ್ರಾಮ ಒನ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿಯವರು ಇಂದು ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಗ್ರಾಮ ಒನ್ ಆಪರೇಟರುಗಳೊಂದಿಗೆ ಸಂವಾದ ನಡೆಸಿದರು.
ಸಂದರ್ಭದಲ್ಲಿ ಮಾತನಾಡಿದ ಹಲವು ಯುವಕರು, ನಿರುದ್ಯೋಗಿಯಾಗಿದ್ದ ತಮಗೆ ಸಂತ ಊರಿನಲ್ಲೇ ಗ್ರಾಮ ಒನ್ ಆಪರೇಟರ್ ಆಗಿ ಕಾರ್ಯನಿರ್ವಹಿಸಲು ಅವಕಾಶ ದೊರೆತಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಗ್ರಾಮ ಒನ ಆಪರೇಟರುಗಳಾದ ಹಾವೇರಿಯ ಸಂಜೀವ ಕನವಳ್ಳಿ ಮತ್ತು ಬಳ್ಳಾರಿ ಜಿಲ್ಲೆಯ ಸುರೇಶ ಅವರು ವಿಕಲಚೇತನರು. ಈ ಯೋಜನೆಯಿಂದ ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಕಚೇರಿಗಳ ಕೆಲಸಗಳಿಗೆ ಓಡಾಡುವುದು ತಪ್ಪಿದೆ ಎಂದು ಹರ್ಷ ವ್ಯಕ್ತಪಡಿಸಿದರು.
 
ಬೆಳಿಗ್ಗೆ 8 ರಿಂದ ರಾತ್ರಿ 8 ರ ವರೆಗೂ ತೆರೆದಿರುವುದರಿಂದ ತಮ್ಮ ಕೆಲಸಕ್ಕೆ ತೆರಳುವ ಮುನ್ನ ಅಥವಾ ಕೆಲಸ ಮುಗಿಸಿ ಹಿಂದಿರುಗಿದ ನಂತರವೂ ಅರ್ಜಿ ಸಲ್ಲಿಸಲು ಸಾಧ್ಯವಾಗುವುದರಿಂದ, ಗ್ರಾಮಸ್ಥರಿಗೆ ಅನುಕೂಲವಾಗಿದೆ ಎನ್ನುವ ಅನುಭವವನ್ನು ಬೆಳಗಾವಿಯ ಬಸವರಾಜ ಪುಜಾರಿ ಮತ್ತಿತರರು ತೆರೆದಿಟ್ಟರು.
 
ತುಮಕೂರು ಜಿಲ್ಲೆಯ ಯುವತಿಯೊಬ್ಬರು ಮಾತನಾಡಿ, ನಮ್ಮ ಗ್ರಾಮದಲ್ಲಿ ಮಧ್ಯವರ್ತಿಗಳ ಮೇಲೆ ಜನ ಹೆಚ್ಚಾಗಿ ಅವಲಂಬಿಸಿದ್ದರು. ಈಗ ನೇರವಾಗಿ ತಮ್ಮ ಗ್ರಾಮದಲ್ಲೇ ಅರ್ಜಿ ಸಲ್ಲಿಸಲು, ಸೌಲಭ್ಯ ಪಡೆಯಲು ಅವರಿಗೆ ಅನುಕೂಲವಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ತಿಂಗಳಾದ್ರೂ ಮುಗಿದಿಲ್ಲ ನೆಲಮಂಗಲ ಫ್ಲೈಯೋವರ್ ದುರಸ್ತಿ