ಇನ್ನು ಫೈನಲ್‌ ಆಗಿಲ್ಲ ಸಿಎಂ

Webdunia
ಬುಧವಾರ, 17 ಮೇ 2023 (16:36 IST)
ಕರ್ನಾಟಕ ಸಿಎಂ ಆಯ್ಕೆ ಇನ್ನೂ ಆಯ್ಕೆಯಾಗಿಲ್ಲ ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಇಂದು ಅಥವಾ ನಾಳೆ ಸಿಎಂ ಆಯ್ಕೆ ಆಗಲಿದೆ. ಸಿಎಂ ಹುದ್ದೆ ಆಯ್ಕೆಯಾಗಿದೆ ಎಂದು ಸುದ್ದಿ ಹರಿದಾಡುತ್ತಿದೆ. ಆ ರೀತಿಯ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಇಂತಹ ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳಿಂದ ಚರ್ಚೆ ನಡೆಸುತ್ತಿದ್ದಾರೆ. ಖರ್ಗೆ ಯಾವುದೇ ನಿಧಾರ ತೆಗೆದುಕೊಳ್ಳಬಹುದು. ಮೋದಿ ಇಂತಹ ವಿಚಾರದಲ್ಲಿ 10 ರಿಂದ 15 ದಿನ ತೆಗೆದುಕೊಳ್ಳುತ್ತಿದ್ದರು. ಕ್ಯಾಬಿನೆಟ್ ನಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಪ್ರತೀ ಯೋಜನೆಗಳನ್ನು ಈಡೇರಿಸುತ್ತೇವೆ. ಮುಂದಿನ 48ರಿಂದ 78 ಗಂಟೆಯೊಳಗೆ ಹೊಸ ಸರಕಾರ ಅಸ್ತಿತ್ವದಲ್ಲಿ ಇರಲಿದೆ ಎಂದಿದ್ದಾರೆ. ಕರ್ನಾಟಕ ಸಿಎಂ ಆಯ್ಕೆಯಾಗಿದೆ ಎಂದು ಸಾಕಷ್ಟು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಹತಾಶೆಯಿಂದ ಬಿಜೆಪಿ ಈ ಸುದ್ದಿಯನ್ನು ಹರಿಯಬಿಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಸಿರುವ ಸುರ್ಜೇವಾಲಾ ಇಂತಹ ಯಾವುದೇ ಸುದ್ದಿಯನ್ನು ಯಾರೂ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಯಾವ ನಾಯಿ ಯಾವ ಮನಸ್ಥಿತಿಯಲ್ಲಿದೆ ಎಂದೂ ಯಾರಿಗೂ ತಿಳಿದಿಲ್ಲ: ಸುಪ್ರೀಂಕೋರ್ಟ್‌

ಬಿಹಾರ: ಹಿಜಾಬ್ ಧರಿಸಿ ಬಂದ್ರೆ ಇನ್ಮುಂದೆ ಆಭರಣದ ಅಂಗಡಿಗೆ ಎಂಟ್ರಿಯಿಲ್ಲ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments