Select Your Language

Notifications

webdunia
webdunia
webdunia
Friday, 11 April 2025
webdunia

ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಸ್ವಕ್ಷೇತ್ರದಲ್ಲಿ ಸಿಎಂ ಜನತಾ ದರ್ಶನ

ಸಿಎಂ ಕುಮಾರಸ್ವಾಮಿ
ಬೆಂಗಳೂರು , ಸೋಮವಾರ, 17 ಜೂನ್ 2019 (10:39 IST)
ಬೆಂಗಳೂರು : ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಸ್ವಕ್ಷೇತ್ರಕ್ಕೆ ಭೇಟಿ ನೀಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಸ್ವಕ್ಷೇತ್ರ ಚೆನ್ನಪಟ್ಟಣಕ್ಕೆ ಸಿಎಂ ಕುಮಾರಸ್ವಾಮಿ ಜನತಾ ದರ್ಶನಕ್ಕೆ ಆಗಮಿಸಲಿದ್ದಾರೆ.




ಇಂದು ಹಾಗೂ ನಾಳೆ ಚನ್ನಪಟ್ಟಣದ ಜಿಲ್ಲಾ ಪಂಚಾಯ್ತಿವಾರು ಜನತಾದರ್ಶನ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಆಗಮಿಸಲಿದ್ದಾರೆ. ಚನ್ನಪಟ್ಟಣ ತಾಲೂಕಿನ ಅಕ್ಕೂರು ಜಿಲ್ಲಾ ಪಂಚಾಯ್ತಿನಲ್ಲಿ ಬೆಳಗ್ಗೆ 10 ಗಂಟೆಗೆ, ಕೋಡಂಬಳ್ಳಿ ಜಿಲ್ಲಾ ಪಂಚಾಯ್ತಿನಲ್ಲಿ ಮಧ್ಯಾಹ್ನ 1 ಗಂಟೆಗೆ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿನಲ್ಲಿ 4 ಗಂಟೆಗೆ ಜನತಾದರ್ಶನ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.


ಹಾಗೇ ನಾಳೆ ಬೆಳಗ್ಗೆ 9 ಗಂಟೆಗೆ ಬೇವೂರು, ಮಧ್ಯಾಹ್ನ 2 ಗಂಟೆಗೆ ಮಳೂರು ಹಾಗೂ ಸಾಯಂಕಾಲ ಚನ್ನಪಟ್ಟಣ ಟೌನ್‍ನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಇಂದು ದೇಶದಾದ್ಯಂತ ವೈದ್ಯರ ಮುಷ್ಕರ