Webdunia - Bharat's app for daily news and videos

Install App

ಸಿಎಂ ರಾಜ್ಯ ಪ್ರವಾಸ ಶೀಘ್ರದಲ್ಲೇ..!!

Webdunia
ಶುಕ್ರವಾರ, 16 ಸೆಪ್ಟಂಬರ್ 2022 (16:16 IST)
ಅನಿವಾರ್ಯ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ 24ಕ್ಕೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಹಿಂದೆ ಸೆ.11ರಂದು ಕಾರ್ಯಕಾರಿಣಿ ಸಭೆ ನಡೆಯಬೇಕಾಗಿತ್ತು. ದೊಡ್ಡಬಳ್ಳಾಪುರದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮ ಹಾಗೂ ಅಧಿವೇಶನದ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು.
ಇದೀಗ 24ರಂದು ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಜೆ.ಪಿ.ನಡ್ಡಾ, ಅಮಿತ್ ಷಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ ಮತ್ತು ರಾಜ್ಯ ಸಚಿವರು, ಶಾಸಕರು, ಲೋಕಸಭೆ ಸದಸ್ಯರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ.
 
ಬಹುನಿರೀಕ್ಷಿತ ಕಾರ್ಯಕಾರಿಣಿ ಸಭೆಯಲ್ಲಿ ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ಹಾಗು 2023ರ ವಿಧಾನಸಭೆ ಚುನಾವವಣೆಗೆ ಕೇಸರಿ ಕಲಿಗಳು ರಣತಂತ್ರ ರೂಪಿಸಲಿದ್ದಾರೆ.
 
ಮಂಗಳೂರು ಮತ್ತು ದೊಡ್ಡಬಳ್ಳಾಪುರದಲ್ಲಿ ನಡೆದ ಯಶಸ್ವಿ ಸಮಾವೇಶದಿಂದ ಬೀಗುತ್ತಿರುವ ಬಿಜೆಪಿ ರಾಜ್ಯಾದಂತ ಜಾತಿವಾರು ಸಮಾವೇಶ ಗಳನ್ನು ನಡೆಸಿ ಚುನಾವಣೆಗೆ ಸಜ್ಜು ಮಾಡಲಿದೆ. ಇದೇ 23ರಂದು ಬಳ್ಳಾರಿಯಲ್ಲಿ ರಾಜ್ಯಮಟ್ಟದ ಬೃಹತ್ ಎಸ್ಟಿ ಸಮಾವೇಶ ನಡೆಯಲಿದೆ. ಸುಮಾರು 3 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments