Webdunia - Bharat's app for daily news and videos

Install App

ರಾಜ್ಯದಲ್ಲಿ HMV ವೈರಸ್ ಪತ್ತೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಮುನ್ನೆಚ್ಚರಿಕೆಗೆ ಸಿಎಂ ಖಡಕ್ ಸೂಚನೆ

Sampriya
ಸೋಮವಾರ, 6 ಜನವರಿ 2025 (15:41 IST)
ಬೆಂಗಳೂರು: ಚೀನಾದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿರುವ ಹೊಸ ಎಚ್‌ಎಂಪಿ ವೈರಾಣು ಸೋಂಕಿನ ಎರಡು ಪ್ರಕರಣ ರಾಜ್ಯದಲ್ಲಿ ಪತ್ತೆಯಾದ ಹಿನ್ನಲೆ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಈ ಬಗ್ಗೆ ಅವರು ಮಾತನಾಡಿದರು.

ಚೀನಾದಲ್ಲಿ ಎಚ್‌ಎಂಪಿ ವೈರಾಣು ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲೂ ಈ ವೈರಾಣು ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಾಣು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.


ಈ ಸಂಬಂಧ ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಾಣು ಹರಡದಂತೆ ತಡೆಯಲು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಸೋಂಕು ತಡೆಗಟ್ಟಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯನ್ನು ಪುನಃ ಆರಂಭಿಸುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments