Publish Date: Wed, 07 Nov 2018 (09:17 IST)
Updated Date: Wed, 07 Nov 2018 (09:19 IST)
ಬೆಂಗಳೂರು: ಮೊನ್ನೆಯಷ್ಟೇ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಸೋತರೂ ಬಿಜೆಪಿಯವರು ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನ ಬಿಟ್ಟಿಲ್ಲ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕೆಲವು ಶಾಸಕರಿಗೆ ಈಗಲೂ ಬಿಜೆಪಿ ನಾಯಕರು ಕೋಟಿ ಕೋಟಿ ರೂ. ಹಣ ಆಮಿಷ ಒಡ್ಡುತ್ತಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಶಾಸಕರನ್ನು ತಮ್ಮ ಕಡೆಗೆ ಸೆಳೆದು ಸರ್ಕಾರ ಉರುಳಿಸಲು ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ ಎಂದು ಸಿಎಂ ಎಚ್ ಡಿಕೆ ಹೇಳಿದ್ದಾರೆ.
ಈ ಗೆಲುವು ರಾಜ್ಯದ ಸಮ್ಮಿಶ್ರ ಸರ್ಕಾರದ ಮೇಲೆ ಜನತೆಗೆ ಇರುವ ವಿಶ್ವಾಸದ ಪ್ರತೀಕ. ಆದರೆ ಬಿಜೆಪಿಯವರು ಹಿಂಬಾಗಿಲ ಮೂಲಕ ಅಧಿಕಾರ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.