ರಾಜ್ಯಪಾಲರ ವಿರುದ್ಧವೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಎಂ ಪರ ವಕೀಲರು

ಶುಕ್ರವಾರ, 19 ಜುಲೈ 2019 (10:20 IST)
ಬೆಂಗಳೂರು: ಇಂದು ಮಧ್ಯಾಹ್ನ 1.30 ರೊಳಗೆ ವಿಶ್ವಾಸ ಮತ ಸಾಬೀತುಪಡಿಸುವಂತೆ ರಾಜ್ಯಪಾಲರು ನೀಡಿದ ಸೂಚನೆ ವಿರುದ್ಧ ಸಿಎಂ ಕುಮಾರಸ್ವಾಮಿ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.


ಎಲ್ಲವೂ ಸುಗಮವಾಗಿ ನಡೆಯುತ್ತಿರುವಾಗ ರಾಜ್ಯಪಾಲರು ಯಾಕೆ ಈ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ ಎಂದು ಆರೋಪಿಸಿ, ರಾಜ್ಯಪಾಲರ ಸೂಚನೆಗೆ ತಡೆ ನೀಡುವಂತೆ ಕೋರಿ ಸಿಎಂ ಪರ ವಕೀಲ ರಾಜೀವ್ ಧವನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ.

ಈಗಾಗಲೇ ಕೋರ್ಟ್ ಗೆ ಬಂದಿರುವ ರಾಜೀವ್ ಧವನ್ 10.30 ರ ಸುಮಾರಿಗೆ ಅರ್ಜಿ ಸಲ್ಲಿಸಲಿದ್ದಾರೆ. ಈ ಮೂಲಕ ರಾಜ್ಯಪಾಲರ ಆದೇಶಕ್ಕೆ ತಡೆ ಹಿಡಿಯಲು ಸೂಚನೆ ನೀಡುವಂತೆ ಒತ್ತಾಯಿಸಲಿದ್ದಾರೆ. ವಿಶ್ವಾಸ ಮತ ಯಾಚನೆಗೆ ಮೊದಲು ವಿಪ್ ಬಗ್ಗೆ ಇರುವ ಗೊಂದಲ ನಿವಾರಣೆಯಾಗಬೇಕೆಂದು ಆಗ್ರಹಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸ್ಪೀಕರ್ ಕಾಂಗ್ರೆಸ್ ನ ಏಜೆಂಟ್ ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ