Publish Date: Wed, 15 Aug 2018 (09:54 IST)
Updated Date: Wed, 15 Aug 2018 (09:57 IST)
ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಸಿಎಂ ಕುಮಾರಸ್ವಾಮಿ ಅವರು ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ.
ನೀರಿನ ಅಭಾವದಿಂದ ಕಳೆದ ಕೆಲವು ವರ್ಷಗಳಿಂದ ಕೃಷಿ ಚಟುವಟಿಕೆ ಸ್ಥಗಿತವಾಗಿತ್ತು. ಪ್ರಸಕ್ತ ವರ್ಷ ಹೆಚ್ಚು ಮಳೆಯಾಗಿದೆ.
ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪೈರು ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ವರ್ಷ ರಾಜ್ಯದ ಹಲವು ಜಲಾಶಯಗಳು ತುಂಬಿವೆ. ಆದ್ರೂ 13 ಜಿಲ್ಲೆಗಳಲ್ಲಿ ಬರಗಾಲವಿದೆ ಎಂದರು.
ಹಾಗೇ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಪ್ರಥಮ ಸ್ಥಾನ ಪಡೆದಿದೆ. ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ.
ರಾಜ್ಯದಲ್ಲಿ ಎಲ್ಲರಿಗೂ ಕೌಶಲ್ಯ ತರಬೇತಿ ನೀಡಲು ಆದ್ಯತೆ. ಪ್ರತಿ ಜಿಲ್ಲೆಯಲ್ಕೂ 1 ಲಕ್ಷ ಉದ್ಯೋಗ ಸೃಷ್ಟಿಸಲು ಆದ್ಯತೆ. ಲಭ್ಯವಿರುವ ಸಂಪನ್ಮೂಲ ಬಳಕೆಯಿಂದ ಯಶಸ್ಸು ಸಾಧ್ಯ. ಚೀನಾ ಸಾಧಿಸಿದ ಯಶಸ್ಸು ನಮಗೆ ಪ್ರೇರಣೆಯಾಗಬೇಕು ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ