Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಕೇಳಿದ್ದೇನು?

ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಕೇಳಿದ್ದೇನು?
ಬೆಂಗಳೂರು , ಶನಿವಾರ, 15 ಜೂನ್ 2019 (18:01 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಪ್ರಧಾನಮಂತ್ರಿಯಾಗಿ ಪುನರಾಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲ ಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚಿಸಿದರು.

ರಾಜ್ಯದಲ್ಲಿ ಈ ವರ್ಷವೂ ಬರದ ಛಾಯೆ ಇದ್ದು ಶೇ. 45 ರಷ್ಟು ಮಳೆ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಮುಂದಾಗಬೇಕೆಂದರು.

webdunia
ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರಾಜ್ಯ ಸರ್ಕಾರ ಕೂಲಿಯ ಬಾಬ್ತು ಪಾವತಿಸಿದ 1200 ಕೋಟಿ ರೂ. ಮುಂಗಡ ಹಣವೂ ಸೇರಿದಂತೆ ಸುಮಾರು 1500 ಕೋಟಿ ರೂ. ಅನುದಾನ ಬಾಕಿ ಇದೆ. ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೋರಿದರು.

ರಾಜ್ಯದಲ್ಲಿ ಸಾಲ ಮನ್ನಾ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ, ಪಾರದರ್ಶಕವಾಗಿ ಅನುಷ್ಠಾನಗೊಳಿಸಲಾಗಿದೆ. ವಾಣಿಜ್ಯ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಒಟ್ಟು 30 ಲಕ್ಷ ರೈತರ 16000 ಕೋಟಿ ರೂಪಾಯಿ ಸಾಲಮನ್ನಾ ಸೌಲಭ್ಯಕ್ಕೆ ಅರ್ಹ ಎಂದು ಗುರುತಿಸಲಾಗಿತ್ತು.

ಅದರಲ್ಲಿ ಈ ವರೆಗೆ ದಾಖಲೆಗಳನ್ನು ಒದಗಿಸಿದ ರಾಜ್ಯದ ವಾಣಿಜ್ಯ ಬ್ಯಾಂಕುಗಳ 9 ಲಕ್ಷ ಹಾಗೂ ಸಹಕಾರಿ ಬ್ಯಾಂಕುಗಳ 14 ಲಕ್ಷ ಫಲಾನುಭವಿಗಳ ಒಟ್ಟು 12830 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲು ಕ್ರಮ ವಹಿಸಲಾಗಿದೆ. ಫಲಾನುಭವಿಗಳನ್ನು ಗುರುತಿಸುವಲ್ಲಿ ಕೆಲವು ಬ್ಯಾಂಕುಗಳಿಂದ ಲೋಪವಾದ್ದರಿಂದ ಸ್ವಲ್ಪ ಗೊಂದಲ ಉಂಟಾಗಿತ್ತು. ನಿನ್ನೆ ಬ್ಯಾಂಕರ್ ಗಳ ಸಭೆ ನಡೆಸಿ ಗೊಂದಲ ಬಗೆಹರಿಸಲಾಯಿತು ಎಂದು  ವಿವರಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಜೂನ್ 16 ರಂದು ಎಸ್.ಡಿ.ಎ. ಪರೀಕ್ಷೆ: ತೀವ್ರ ಕಟ್ಟೆಚ್ಚರಕ್ಕೆ ಸೂಚನೆ