ಸಿಎಂ ಕುಮಾರಸ್ವಾಮಿ ವಿಶ್ರಾಂತಿ ಹಿಂದೆ ಬೇರೆಯದೇ ಲೆಕ್ಕಾಚಾರ?!

ಶುಕ್ರವಾರ, 9 ನವೆಂಬರ್ 2018 (11:14 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿಗೆ ತೆರಳಿದ್ದು, ಇದರ ಹಿಂದೆ ಬೇರೆಯದೇ ಲೆಕ್ಕಾಚಾರಗಳಿವೆಯೇ ಎಂಬ ಅನುಮಾನ ಮೂಡಿದೆ.

ನಾಳೆ ವಿವಾದಿತ ಟಿಪ್ಪು ಜಯಂತಿ ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆಸಲು ನವಂಬರ್ 3 ರಂದೇ ನಿರ್ಧರಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ನನ್ನ ಹೆಸರು ಹಾಕಬೇಡಿ ಎಂದು ಸಿಎಂ ಮೊದಲೇ ಸೂಚಿಸಿದ್ದರು.

ಟಿಪ್ಪು ಜಯಂತಿ ವಿವಾದಗಳು, ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಗಳಿಂದಾಗಿ ಸಿಎಂ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದಾರಾ ಎಂಬ ಊಹಾಪೋಹಗಳು ಎದ್ದಿವೆ. ಹೀಗಾಗಿ ಮುಖ್ಯಮಂತ್ರಿಗಳು ಕಾರ್ಯಕ್ರಮದಿಂದ ದೂರ ಉಳಿದರೆ ಮತ್ತೊಂದು ವಿವಾದವಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ದೀಪಾವಳಿ ಶಾಪಿಂಗ್ ಕರೆದೊಯ್ಯಲು ನಿರಾಕರಿಸಿದ್ದಕ್ಕೆ ಕೊಲೆ