Select Your Language

Notifications

webdunia
webdunia
webdunia
webdunia

ಕರ್ನಾಟಕ ಬಜೆಟ್: ಬೆಂಗಳೂರಿಗೆ ಸಿಕ್ಕಿದ್ದೇನು?

ಕರ್ನಾಟಕ ಬಜೆಟ್: ಬೆಂಗಳೂರಿಗೆ ಸಿಕ್ಕಿದ್ದೇನು?
ಬೆಂಗಳೂರು , ಗುರುವಾರ, 5 ಜುಲೈ 2018 (12:16 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ಮಂಡಿಸುತ್ತಿದ್ದು, ರಾಜಧಾನಿ ಬೆಂಗಳೂರಿಗೆ ಕೆಲವು ಕೊಡುಗೆಗಳನ್ನು ನೀಡಿದ್ದಾರೆ.

ಮೆಟ್ರೋ ಮೂರನೇ ಹಂತದ ಕಾಮಗಾರಿ ಆರಂಭಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಅದರಲ್ಲಿ ಜೆಪಿ ನಗರದಿಂದ ಕೆಆರ್ ಪುರಂವರೆಗೆ ಮೆಟ್ರೋ ಕಾಮಗಾರಿ ಮಾಡುವುದಾಗಿ ಘೋಷಿಸಿದ್ದಾರೆ.

ಇನ್ನು, ಬಿಎಂಟಿಸಿಗೆ ನೇರವಾಗಿ 100 ಕೋಟಿ ರೂ. ಸಹಾಯ ಧನ ನೀಡಲಾಗಿದೆ. ಅದಲ್ಲದೆ, ಬಿಎಂಟಿಸಿ ವತಿಯಿಂದ 80 ಇಲೆಕ್ಟ್ರಿಕ್ ಬಸ್ ಗಳನ್ನು ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಇನ್ನು, ಕಲುಷಿತಗೊಂಡಿರುವ ಬೆಳಂದೂರು ಕೆರೆ ಸೇರಿದಂತೆ ನಗರದ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಇನ್ನು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದು, ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ಆರಂಭಿಕ ಹಂತದಲ್ಲಿ 1000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗುವುದು. ನಂತರ ಇದನ್ನು ವಿಸ್ತರಿಸುವ ಯೋಜನೆಯಿದೆ. ಇನ್ನು ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಬಜೆಟ್: ಶ್ರೀ ಸಾಮಾನ್ಯರಿಗೆ ವಿದ್ಯುತ್, ಇಂಧನ ಶಾಕ್! ರೈತರಿಗೆ ಸಾಲಮನ್ನಾ ಸ್ವೀಟ್!