Publish Date: Sat, 24 Nov 2018 (09:58 IST)
Updated Date: Sat, 24 Nov 2018 (10:00 IST)
ಬೆಂಗಳೂರು: ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇಂದು ಜೆಡಿಎಸ್ ನಾಯಕರು ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಸೇರಲಿದ್ದಾರೆ.
ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯುವ ಹಿನ್ನಲೆಯಲ್ಲಿ ಪಕ್ಷದ ಶಾಸಕರು, ಸಚಿವ ಸ್ಥಾನಕ್ಕಾಗಿ ಬಂಡಾಯವೇಳದಂತೆ, ಸರ್ಕಾರದ ವಿರುದ್ಧ ಹೋಗದಂತೆ ಪಾಠ ಹೇಳಲು ಕುಮಾರಸ್ವಾಮಿ ತುರ್ತು ಸಭೆ ಕರೆದಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಸೂಚನೆಯಂತೆ ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭ ಜೆಡಿಎಸ್ ನ ಎರಡು ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ. ಈ ಸ್ಥಾನ ಹಂಚಿಕೆ ಕುರಿತಂತೆ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.