Publish Date: Mon, 15 Oct 2018 (08:53 IST)
Updated Date: Mon, 15 Oct 2018 (08:55 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಜತೆ ಕೈ ಜೋಡಿಸಬೇಕು ಎಂದು ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಖಾಸಗಿ ವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಕುಮಾರಸ್ವಾಮಿ ಬಿಜೆಪಿ ನೇತೃತ್ವದ ಎನ್ ಡಿಎ ಸೋಲಿಸಬೇಕಾದರೆ ಕಾಂಗ್ರೆಸ್ ಜತೆ ಕೈ ಜೋಡಿಸಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಜತೆಗೆ ಸಮ್ಮಿಶ್ರ ಸರ್ಕಾರದ ಪಾಲುದಾರರಾಗಿರುವ ಸಿಎಂ ಕುಮಾರಸ್ವಾಮಿಯ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲೂ ಜತೆಯಾಗಿ ಕರ್ನಾಟಕದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಡುವೆ ಅವರು ದೇಶದ ಎಲ್ಲಾ ಪ್ರಾದೇಶಿಕ ಪಕ್ಷಗಳಿಗೂ ಈ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.