Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಿಎಂ ಸೂಚನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಿಎಂ ಸೂಚನೆ
ಬೆಂಗಳೂರು , ಮಂಗಳವಾರ, 10 ಜುಲೈ 2018 (11:23 IST)
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಡ್ಯಾಂಗಳಲ್ಲಿ ಸಾಕಷ್ಟು ನೀರು ತುಂಬಿರುವುದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗಿರುವುದರಿಂದ ಕಾವೇರಿ ಕೊಳ್ಳದಲ್ಲಿ ನೀರು ಭರ್ತಿಯಾಗುತ್ತಿದೆ. ಈ ಹಿನ್ನಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ತಮಿಳುನಾಡಿಗೆ ನೀರು ಬಿಡಲು ಸೂಚಿಸುವ ಮೂಲಕ ಜಾಣತನದ ಹೆಜ್ಜೆಯಿಟ್ಟಿದ್ದಾರೆ ಎನ್ನಲಾಗಿದೆ. ಮಳೆ ಹೆಚ್ಚಾಗಿರುವುದರಿಂದ ನೀರು ಬಿಡದೇ ಇದ್ದರೆ ಯಾವುದೇ ಪ್ರಾಧಿಕಾರದಿಂದ ಆಕ್ಷೇಪ ಬರದಂತೆ ಸಿಎಂ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಕರಾವಳಿಯಲ್ಲಿ ಕಾಂಗ್ರೆಸ್ ಗೆ ಬಲ ತುಂಬಲು ಹೊಸ ಪ್ರಯತ್ನ