Publish Date: Mon, 14 Jan 2019 (09:28 IST)
Updated Date: Mon, 14 Jan 2019 (09:30 IST)
ಮೈಸೂರು : ಸಿಎಂ ಕುಮಾರಸ್ವಾಮಿಯನ್ನು ಕ್ಲರ್ಕ್ ಅಂತ ಕರೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೀಗ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಕರ್ನಾಟಕದಲ್ಲಿ ಜೆಡಿಎಸ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ನಂತೆ ನಡೆಸಿಕೊಳ್ಳುತ್ತಿದೆ ಎಂದು ನನಗೆ ಅನ್ನಿಸುತ್ತದೆ ಎಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಸಮಾವೇಶದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಹೇಳಿದ್ದರು.
ಈ ಬಗ್ಗೆ ಇದೀಗ ಪ್ರತಿಕ್ರಿಯೆ ನೀಡಿರುವ ಸಿಎಂ ಕುಮಾರಸ್ವಾಮಿ,’ ನಾನು ಕ್ಲರ್ಕ್ ಎಂದು ನರೇಂದ್ರ ಮೋದಿ ಅವರಿಗೆ ಹೇಳಿದ್ಯಾರು? ನಾನು ಹೇಳಿದ್ದೇನಾ? ಮೋದಿ ಅವರು ಗೌರವಯುತ ಸ್ಥಾನದಲ್ಲಿದ್ದು, ಹೀಗೆ ಮಾತನಾಡುವುದು ಸರಿಯಲ್ಲ. ಪ್ರಧಾನಿಯಾಗಿ ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಇದರಿಂದ ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.