Publish Date: Tue, 20 Nov 2018 (08:56 IST)
Updated Date: Tue, 20 Nov 2018 (08:57 IST)
ಬೆಂಗಳೂರು: ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರ ಜತೆ ಇಂದು ಸಿಎಂ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.
ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರು ಸಿಎಂ ಜತೆ ಮಾತುಕತೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿದ್ದರು. ಕಬ್ಬಿಗೆ ದರ ನಿಗದಿ ಜತೆಗೆ ಸಿಎಂ ರೈತರ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು.
ಇಂದು ಬೆಳಗಾವಿಯ ರೈತ ಮುಖಂಡರ ಜತೆಗೆ ಸಿಎಂ ಸಭೆ ನಡೆಸಲಿದ್ದಾರೆ. ಈಗಾಗಲೇ ಸಭೆಯಲ್ಲಿ ಪಾಲ್ಗೊಳ್ಳಲು ರೈತ ಮುಖಂಡರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇಂದು ನಡೆಯಲಿರುವ ಸಭೆಯಲ್ಲಿ ರೈತರಿಗೆ ಸೂಕ್ತ ಭರವಸೆ ಸಿಗದೇ ಇದ್ದರೆ ಪ್ರತಿಭಟನೆ ಕಾವು ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.