Publish Date: Fri, 08 Jun 2018 (12:41 IST)
Updated Date: Fri, 08 Jun 2018 (12:43 IST)
ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ನಾಯಕರ ಭಿನ್ನಮತ ಜೋರಾಗಿದ್ದು, ಕಾಂಗ್ರೆಸ್ ನಾಯಕರ ಭಿನ್ನಮತ ಶಮನಕ್ಕೆ ಸ್ವತಃ ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ.
ಕಾಂಗ್ರೆಸ್ ನ ಪ್ರಮುಖ ನಾಯಕ ಎಂಬಿ ಪಾಟೀಲ್ ಮನೆಗೆ ಭೇಟಿಯಿತ್ತ ಸಿಎಂ ಕುಮಾರಸ್ವಾಮಿ ಸಮಾಧಾನಪಡಿಸಲು ಮುಂದಾಗಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಎಂಬಿ ಪಾಟೀಲ್ ಬೆಂಬಲಿಗರು ವಿಜಯಪುರ ಬಂದ್ ಗೆ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ನಿವಾಸಕ್ಕೆ ಸ್ವತಃ ಸಿಎಂ ಎಚ್ ಡಿಕೆ ಆಗಮಿಸಿ ಮಾತುಕತೆ ನಡೆಸಿದ್ದಾರೆ.
ಇನ್ನೊಂದೆಡೆ ಕುಲಬರಗಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಭಿನ್ನಮತ ಮರೆತು ಪಕ್ಷಕ್ಕಾಗಿ, ಸರ್ಕಾರದ ಒಳಿತಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.