Publish Date: Thu, 23 May 2019 (06:39 IST)
Updated Date: Thu, 23 May 2019 (06:42 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿಗೆ ಇಂದು ಮಹತ್ವದ ದಿನ. ಒಂದೆಡೆ ಖುಷಿಯಾದರೆ ಇನ್ನೊಂದೆಡೆ ಆತಂಕವೂ ಇದೆ.
ಇಂದು ಸಿಎಂ ಕುಮಾರಸ್ವಾಮಿ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ. ಇನ್ನೊಂದೆಡೆ ಇಂದು ಲೋಕಸಭೆ ಚುನಾವಣೆ ಫಲಿತಾಂಶ ಬರಲಿದ್ದು, ಮಂಡ್ಯದಿಂದ ಸ್ಪರ್ಧಿಸಿರುವ ಪುತ್ರ ನಿಖಿಲ್ ಕುಮಾರಸ್ವಾಮಿ ಭವಿಷ್ಯದ ಏನಾಗುವುದೋ ಎಂಬ ಆತಂಕ.
ಈ ಹಿನ್ನಲೆಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿನ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಪುತ್ರ ಮತ್ತು ತಂದೆ, ತುಮಕೂರು ಅಭ್ಯರ್ಥಿ ಎಚ್ ಡಿ ದೇವೇಗೌಡ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ