Select Your Language

Notifications

webdunia
webdunia
webdunia
webdunia

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಭವಿಷ್ಯ ನುಡಿದ ಸಿಎಂ ಕುಮಾರಸ್ವಾಮಿ

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಭವಿಷ್ಯ ನುಡಿದ ಸಿಎಂ ಕುಮಾರಸ್ವಾಮಿ
ಬೆಂಗಳೂರು , ಶನಿವಾರ, 18 ಮೇ 2019 (14:21 IST)
ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ರಾಜ್ಯದಲ್ಲಿ 18 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.




ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು 86 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ದೇವೆಗೌಡರು, ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಚಿವ ಹೆಚ್.ಡಿ.ರೇವಣ್ಣ ಕುಟುಂಬ ಸಮೇತ ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ.


ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾವು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾತು ಕೊಟ್ಟಿದ್ದೇವೆ. ಅದರಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ರಾಜ್ಯದಲ್ಲಿ 18 ಸ್ಥಾನ ಗೆಲ್ಲುತ್ತದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೋಲ್ ಬಂಕ್ ನಲ್ಲಿ ನೆಲಕ್ಕುರುಳಿದ ಮರ: ಮುಂದೇನಾಯ್ತು?