Publish Date: Thu, 05 Jul 2018 (10:55 IST)
Updated Date: Thu, 05 Jul 2018 (10:57 IST)
ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಲಿದ್ದಾರೆ.
ಈ ನಿಟ್ಟಿನಲ್ಲಿ ಸಿಎಂ ಕುಮಾರಸ್ವಾಮಿ ಇದೀಗ ತಾನೇ ಬಜೆಟ್ ಪ್ರತಿಯುಳ್ಳ ಸೂಟ್ ಕೇಸ್ ಸಮೇತ ಬಿಗಿ ಭದ್ರತೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಬಜೆಟ್ ಪ್ರತಿಗಳುಳ್ಳ ಸೂಟ್ ಕೇಸ್ ಸಮೇತ ಮಾಧ್ಯಮಗಳಿಗೆ ಪೋಸ್ ನೀಡಿದರು.
ಬಜೆಟ್ ಮಂಡನೆಗೆ ಮೊದಲು ಸಿಎಂ ಸಂಪುಟ ಸಭೆ ನಡೆಸಲಿದ್ದಾರೆ. ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆಯಲಿದ್ದಾರೆ. ಬಳಿಕ ಸದನದಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.