Daily Horoscope
✕

ಬಜೆಟ್ ತಾರತಮ್ಯ ಬಗ್ಗೆ ಬಿಜೆಪಿಗೆ ಸದನದಲ್ಲೇ ಉತ್ತರಿಸುವೆ: ಸಿಎಂ ಎಚ್ ಡಿಕೆ

Webdunia
ಶುಕ್ರವಾರ, 6 ಜುಲೈ 2018 (10:23 IST)
ಬೆಂಗಳೂರು: ಬಜೆಟ್ ನಲ್ಲಿ ಕರಾವಳಿ, ಉತ್ತರ ಕರ್ನಾಟಕ ಭಾಗಗಳನ್ನು ನಿರ್ಲಕ್ಷಿಸಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸುವುದಾಗಿ ಹೇಳಿದ್ದಾರೆ.
 

ಕರಾವಳಿ, ಉತ್ತರ ಕರ್ನಾಟಕ ಭಾಗಗಳನ್ನು ನಿರ್ಲಕ್ಷಿಸಿ ಕೇವಲ ಹೊಳೆನರಸೀಪುರ, ಹಾಸನ, ರಾಮನಗರಕ್ಕೆ ಬಂಪರ್ ಕೊಡುಗೆಗಳನ್ನು ನೀಡಿದ್ದಕ್ಕೆ ಸಿಎಂ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದು ಅಣ್ಣ ತಮ್ಮನ ಬಜೆಟ್ ಎಂದು ಸಿಎಂ ಮತ್ತು ಸಹೋದರ, ಸಚಿವ ರೇವಣ್ಣಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದರು.

ಈ ಆಕ್ರೋಶದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ, ಬಿಜೆಪಿ ಆಕ್ರೋಶಗಳಿದ್ದರೆ ಸದನದಲ್ಲಿ ಪ್ರಸ್ತಾಪಿಸಲಿ. ಅಲ್ಲಿಯೇ ಅದಕ್ಕೆ ಉತ್ತರ ಕೊಡುವೆ ಎಂದಿದ್ದಾರೆ.

ಇನ್ನೊಂದೆಡೆ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಮ್ಮ ಸರ್ಕಾರ ತಾಯಿ ಸ್ಥಾನದಲ್ಲಿದೆ ಎಂದಿದ್ದ ಸಿಎಂ ಕುಮಾರಸ್ವಾಮಿಯೇ ಇಂದು ಕರಾವಳಿಯನ್ನು ನಿರ್ಲಕ್ಷಿಸಿದ್ದಾರೆ. ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments