Publish Date: Sat, 29 Sep 2018 (13:32 IST)
Updated Date: Sat, 29 Sep 2018 (13:33 IST)
ಬೆಂಗಳೂರು: ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ಸಿಎಂ ಕುಮಾರಸ್ವಾಮಿ ನಿರುದ್ಯೋಗಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಉದ್ಯೋಗ ಮೇಳೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ‘ರಾಜ್ಯದ ಎಲ್ಲಾ ಕುಟುಂಬಗಳೂ ನೆಮ್ಮದಿಯಿಂದ ಬದುಕಬೇಕು ಎನ್ನುವುದು ನಮ್ಮ ಕನಸು. ಈಗ ಉದ್ಯೋಗ ಸಿಗಲಿಲ್ಲವೆಂದರೆ ನಿರಾಶರಾಗಬೇಡಿ, ಮರಳಿ ಯತ್ನಿಸಿ’ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ ಅವರು ‘ಸಮ್ಮಿಶ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನು ಮಾಡಲುದ್ದೇಶಿಸಿದೆ. ಈ ಸರ್ಕಾರ ಐದು ವರ್ಷ ಪೂರೈಸಿಯೇ ಪೂರೈಸುತ್ತದೆ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಎರಡು ರೂ. ಕಡಿಮೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಆದರೆ ಎಷ್ಟೇ ಒಳ್ಳೆಯ ಕೆಲಸ ಮಾಡಿದರೂ ಯಾರೂ ಮೆಚ್ಚುಗೆ ಮಾತನಾಡಿಲ್ಲ’ ಎಂದು ಸಿಎಂ ಎಚ್ ಡಿಕೆ ಬೇಸರ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.