Publish Date: Mon, 25 Jun 2018 (11:17 IST)
Updated Date: Mon, 25 Jun 2018 (11:20 IST)
ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ದೋಸ್ತಿ ಪಕ್ಷಗಳ ನಡುವೆ ನಡೆಯುತ್ತಿರುವ ಹಗ್ಗಜಗ್ಗಾಟದ ಬಗ್ಗೆ ಸಿಎಂ ಕುಮಾರಸ್ವಾಮಿ ಗರಂ ಆಗಿಯೇ ಪ್ರತಿಕ್ರಿಯಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಸಾಲಮನ್ನಾ ಮಾಡಲು ಹಣ ಎಲ್ಲಿಂದ ತರುತ್ತಾರೆ ಎಂದು ತಮ್ಮ ಆಪ್ತರ ಬಳಿ ಹೇಳಿದ್ದಾರೆಂಬ ಬೆನ್ನಲ್ಲೇ ಸಿಎಂ ಈ ರೀತಿ ಟಾಂಗ್ ಕೊಟ್ಟಿದ್ದಾರೆ.
‘ಸಾಲಮನ್ನಾದಿಂದ ನನಗೆ ಕಮಿಷನ್ ಸಿಗಲ್ಲ. ನಾನು ಯಾರ ಹಂಗಿನಲ್ಲೂ ಇಲ್ಲ’ ಎಂದು ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಗರಂ ಆಗಿಯೇ ಪ್ರತಿಕ್ರಿಯಿಸಿದ್ದಾರೆ.
ಹಿಂದಿನ ಹಣಕಾಸು ಸಚಿವರು ದುಡ್ಡು ಎಲ್ಲಿಂದ ತರುತ್ತಾನೆ ಎಂದು ಕೇಳಿದ್ದಾರೆ. ಆದರೆ ನಾನು ಯಾರ ಹಂಗಿನಲ್ಲೂ ಇಲ್ಲ. ಸಾಲಮನ್ನಾ ಮಾಡುವುದರಿಂದ ಕಮಿಷನ್ ಕೂಡಾ ಬರಲ್ಲ. ರೈತರಿಗೆ ಒಳ್ಳೆಯದಾಗಲಿ ಎಂದು ಮಾಡುತ್ತಿದ್ದೇನೆ. ನನ್ನ ಅಧಿಕಾರವಧಿ ಬಗ್ಗೆ ಕೆಲವರು ಚರ್ಚೆ ಮಾಡ್ತಿದ್ದಾರೆ. ಅಧಿಕಾರಿಗಳೂ ಕೂಡಾ ನಮ್ಮ ಸರ್ಕಾರ ತುಂಬಾ ದಿನ ಉಳಿಯಲ್ಲ. ಹಾಗಾಗಿ ನಾವು ಹೇಳುವ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಅಗತ್ಯವಿಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಸಹಕಾರ ಬ್ಯಾಂಕ್ ಗಳ ಸಭೆಯಲ್ಲಿ ಕುಮಾರಸ್ವಾಮಿ ಖಾರವಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.