Publish Date: Thu, 29 Nov 2018 (09:39 IST)
Updated Date: Thu, 29 Nov 2018 (09:41 IST)
ಬೆಂಗಳೂರು: ರಾಜಕೀಯ ಜಂಜಾಟಗಳಿಂದ ಬಳಲಿರುವ ಸಿಎಂ ಕುಮಾರಸ್ವಾಮಿ ಆರೋಗ್ಯದ ದೃಷ್ಟಿಯಿಂದ ಒಂದು ವಾರ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಸಿಎಂ ಕುಮಾರಸ್ವಾಮಿ ಈ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಹೆಚ್ಚು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಉದ್ವೇಗಕ್ಕೊಳಗಾಗದಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.
ಸಿಎಂ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಸಿಎಂ ಎಲ್ಲಿ ವಿಶ್ರಾಂತಿ ಪಡೆಯುತ್ತಾರೆ ಎಂಬ ಬಗ್ಗೆ ಖಚಿತ ಮಾಹಿತಿ ಬಂದಿಲ್ಲ. ಆದರೆ ಈ ಬಗ್ಗೆ ಅನಗತ್ಯ ಊಹಾಪೋಹಗಳು ಬೇಡ ಎಂದು ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.