ಸರ್ಕಾರದ ಸಂಕಟ ನಿವಾರಣೆಗೆ ಶೃಂಗೇರಿ ದೇವಿಯ ಮೊರೆ ಹೋದ ಸಿಎಂ ಕುಮಾರಸ್ವಾಮಿ

ಗುರುವಾರ, 6 ಡಿಸೆಂಬರ್ 2018 (09:19 IST)
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಬೆಳಗಾವಿ ಅಧಿವೇಶನ ಇತ್ಯಾದಿ ಸಂಕಟಗಳ ನಡುವೆ ಸಿಎಂ ಕುಮಾರಸ್ವಾಮಿ ಇಂದು ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.


ಇಂದು ಸಂಜೆ ಶೃಂಗೇರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿರುವ ಸಿಎಂ ಕುಮಾರಸ್ವಾಮಿ ಇಂದು ರಾತ್ರಿ ಅಲ್ಲಿಯೇ ಜೆಡಿಎಸ್ ಕಾರ್ಯಕರ್ತರೊಬ್ಬರ ಮನೆಯಲ್ಲಿ ತಂಗಲಿದ್ದಾರೆ. ಬಳಿಕ ಅಲ್ಲಿನ ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ ಶೃಂಗೇರಿ ಶಾರದಾಂಬೆ ದೇವಿಯ ದರ್ಶನ ಪಡೆದು ಕಳೆದ ಕೆಲವು ದಿನಗಳಿಂದ  ಇಲ್ಲಿ ದೇವೇಗೌಡರ ಕುಟುಂಬದ ವತಿಯಿಂದ ನಡೆಯುತ್ತಿರುವ ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಮತ್ತು ಬೆಳಗಾವಿ ಅಧಿವೇಶನಕ್ಕೆ ಮೊದಲು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಕಂಟಕ ಎದುರಾಗದಂತೆ ಸಿಎಂ ಕುಮಾರಸ್ವಾಮಿ ದೇವಿಯ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಟಾಟಾ ಇನ್‍ ಸ್ಟಿಟ್ಯೂಟ್‍ ನಲ್ಲಿ ಸಿಲಿಂಡರ್ ಸ್ಪೋಟ; ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ