Publish Date: Thu, 29 Nov 2018 (11:26 IST)
Updated Date: Thu, 29 Nov 2018 (11:27 IST)
ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಬಗ್ಗೆ ಗೊಂದಲ ಬೇಡ. ಇದಕ್ಕೆ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಷ್ಣು ಸ್ಮಾರಕದ ಬಗ್ಗೆ ಎದ್ದ ಗೊಂದಲಗಳಿಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಸ್ಪಷ್ಟನೆ ಕೊಟ್ಟಿದ್ದಾರೆ.
ನಿನ್ನೆಯಷ್ಟೇ ವಿಷ್ಣುವರ್ಧನ್ ಕುಟುಂಬ ಸುದ್ದಿಗೋಷ್ಠಿ ನಡೆಸಿ ಸಾಹಸಸಿಂಹನ ಸ್ಮಾರಕ ನಿರ್ಮಾಣಕ್ಕೆ ಡಿಸೆಂಬರ್ 30 ರ ಗಡುವು ನೀಡಿತ್ತು. ಈ ಸಂದರ್ಭದಲ್ಲಿ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಉಡಾಫೆ ಮುಖ್ಯಮಂತ್ರಿ ಎಂದಿದ್ದು ನನಗೆ ಬೇಸರವುಂಟು ಮಾಡಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದರು.
ಅದರ ಬೆನ್ನಲ್ಲೇ ಇದೀಗ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು ‘ವಿಷ್ಣುವರ್ಧನ್ ಸೇರಿದಂತೆ ಮಹನೀಯರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಶೀಘ್ರದಲ್ಲೇ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಸಿಎಂ ಟ್ವೀಟ್ ಮಾಡಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.