Publish Date: Fri, 21 Sep 2018 (07:11 IST)
Updated Date: Fri, 21 Sep 2018 (07:13 IST)
ಬೆಂಗಳೂರು: ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ಕೊಡುತ್ತೇನೆ ಎಂದಿದ್ದ ಸಿಎಂ ಕುಮಾರಸ್ವಾಮಿ ಆ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ದಂಗೆ ಎಂದಿದ್ದು ಪ್ರತಿಭಟನೆ ಎಂಬ ಅರ್ಥದಲ್ಲಿ. ಯಡಿಯೂರಪ್ಪನವರೂ ಎಷ್ಟು ಬಾರಿ ಪ್ರತಿಭಟನೆ ಮಾಡಿಲ್ಲ? ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ.
ಹಾಗಿದ್ದರೂ ಸಿಎಂ ಹೇಳಿಕೆಯಿಂದ ಸಮಾಧಾನಗೊಳ್ಳದ ಬಿಜೆಪಿ ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಲು ನಿರ್ಧರಿಸಿದೆ. ಸಿಎಂ ಹೇಳಿಕೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎನ್ನುವುದಕ್ಕೆ ಸಾಕ್ಷಿ. ಹೀಗಾಗಿ ತಕ್ಷಣವೇ ಸರ್ಕಾರ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.