Webdunia - Bharat's app for daily news and videos

Install App

ಗಾಂಧಿ ಸ್ಮಾರಕ ನಿಧಿ ಜಾಲತಾಣಕ್ಕೆ ಚಾಲನೆ ಕೊಟ್ಟ ಸಿಎಂ

Webdunia
ಸೋಮವಾರ, 2 ಅಕ್ಟೋಬರ್ 2023 (14:40 IST)
ದೇಶಕ್ಕೆ ಗಾಂಧಿ ಒಬ್ಬರೇ ಮಹಾತ್ಮ ಮತ್ತು ಪಿತಾಮಹ. ಯಾವುದೇ ಪ್ರಚಾರದ ಸಾಮಾಗ್ರಿ ಮತ್ತು ತಂತ್ರಜ್ಞಾನ ಇಲ್ಲದೆ ಕೇವಲ ಅಹಿಂಸೆ ಮತ್ತು ತಮ್ಮ ಬದುಕಿನ ಸರಳತೆಯಿಂದಲೇ ಮಹಾತ್ಮಗಾಂಧಿ ವಿಶ್ವದ ಮೂಲೆ ಮೂಲೆಗೆ ತಲುಪಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಹಲವು ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಅವರ ಜಯಂತಿ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
 
ಒಮ್ಮೆ ರೈಲಿನಲ್ಲಿ ಮೂರನೇ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರು, "ಏಕೆ ಮೂರನೇ ದರ್ಜೆ ಸೀಟಿನಲ್ಲಿ ಪ್ರಯಾಣಿಸುತ್ತಿದ್ದೀರಿ" ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗಾಂಧಿ ಅವರು, "ನಾಲ್ಕನೇ ದರ್ಜೆ ರೈಲಿನಲ್ಲಿ ಇಲ್ಲ. ಇದ್ದಿದ್ದರೆ ಅಲ್ಲೇ ಪ್ರಯಾಣಿಸುತ್ತಿದ್ದೆ. ಅದು ಇಲ್ಲದ್ದರಿಂದ ಮೂರನೇ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದೇನೆ" ಎಂದರು. ಇಷ್ಟು ಸರಳವಾದ ವ್ಯಕ್ತಿತ್ವ ಗಾಂಧಿಯವರದ್ದಾಗಿತ್ತು ಎಂದು ಉದಾಹರಿಸಿದರು. 
 
ನಮ್ಮ ಸರ್ಕಾರ ರೂಪಿಸುತ್ತಿರುವ ಕಾರ್ಯಕ್ರಮಗಳಲ್ಲಿ ಮಹಾತ್ಮಗಾಂಧಿ ಅವರ ಆಶಯಗಳು ಸೇರಿವೆ. ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿ ಎಂದರು. ಕಾನೂನು ಸಚಿವ ಹೆಚ್.ಕೆ.ಪಾಟೀಲ್  ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ವಿಡಿಯೊ: ಇಂಡೋನೇಷ್ಯಾದಲ್ಲಿ ಬೆಳ್ಳಂಬೆಳಿಗ್ಗೆ ನಡುಗಿದ ಭೂಮಿ: ಕರಾವಳಿಗೆ ಭೀಕರ ಸುನಾಮಿಯ ಎಚ್ಚರಿಕೆ

ಮುಂದಿನ ಸುದ್ದಿ
Show comments