Webdunia - Bharat's app for daily news and videos

Install App

ಗಡಿ ಜಿಲ್ಲೆಗಳ ಜತೆ ಇಂದು ಸಿಎಂ ಸಭೆ

Webdunia
ಶನಿವಾರ, 31 ಜುಲೈ 2021 (08:10 IST)
ಬೆಂಗಳೂರು(ಜು.31):  ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ.

•ನೆರೆ ರಾಜ್ಯ ಕೇರಳದಲ್ಲಿ ದಿನದಿನವೂ ಏರುತ್ತಿದೆ ಕೋವಿಡ್ ಸೋಂಕು
•ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ
•ಕೈಗೊಳ್ಳಬೇಕಾದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚನೆ

ಶನಿವಾರ ಸಂಜೆ 5.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಮುಖ್ಯಮಂತ್ರಿ ಬೊಮ್ಮಾಯಿ ವಿಡಿಯೋ ಸಂವಾದ ನಡೆಸಿ ಅಲ್ಲಿನ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಅಲ್ಲದೆ, ಬೆಂಗಳೂರು ನಗರದ ಅಧಿಕಾರಿಗಳು ಸಹ ಭಾಗಿಯಾಗಲಿದ್ದು, ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ.
ಈ ಬಗ್ಗೆ ಶುಕ್ರವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಶನಿವಾರ ಸಂಜೆ ಬೆಂಗಳೂರಿಗೆ ತೆರಳಿದ ಬಳಿಕ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದುಕೊಳ್ಳಲಾಗುವುದು. ಕೇರಳದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳವಾಗಿರುವುದರಿಂದ ರಾಜ್ಯದ ಗಡಿ ಭಾಗದಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ಚರ್ಚಿಸಿ ಅಗತ್ಯ ಸೂಚನೆಗಳನ್ನು ನೀಡಲಾಗುವುದು. ಕೇರಳದಲ್ಲಿ ಕೋವಿಡ್ ಹೆಚ್ಚಳವಾಗಿರುವ ಬಗ್ಗೆ ಕಳವಳವಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಮುಂದಿನ ಸುದ್ದಿ
Show comments