Publish Date: Mon, 12 Jun 2023 (20:30 IST)
Updated Date: Mon, 12 Jun 2023 (20:16 IST)
ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ 8 ಜಿಲ್ಲೆಯ ಡಿಸಿಗಳ ಜೊತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸುತ್ತಿದ್ದಾರೆ. ಜಲಜೀವನ್ ಮಿಷನ್ ಬಗ್ಗೆ ಅಧಿಕಾರಿಗಳ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, CEOಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದಾರೆ.