Publish Date: Tue, 18 Jan 2022 (16:26 IST)
Updated Date: Tue, 18 Jan 2022 (18:29 IST)
ಬೆಂಗಳೂರು ಆರ್ ಟಿ ನಗರದ ನಿವಾಸದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗಳ ಡಿಸಿಗಳ ಜೊತೆ ವರ್ಚುವಲ್ ಸಭೆ ನಡೆಸಿದರು. 18 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿ.ಇ.ಒ ಗಳೊಂದಿಗೆ ಸಭೆ ನಡೆಸಲಾಯಿತು. ಕೋವಿಡ್ 19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದರು.
ಜಿಲ್ಲಾಧಿಕಾರಿಗಳು ಹಾಗು ಸಿ.ಇ.ಒ ಗಳು ಲಸಿಕಾ ಪ್ರಗತಿ ಕಾರ್ಯಗಳ ಬಗ್ಗೆ ವಿವರಿಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.