ರಾಜ್ಯದಲ್ಲಿ ವರುಣ ತನ್ನ ಆರ್ಭಟವನ್ನು ಮುಂದುವರೆಸಿದ್ದಾನೆ. ನಿರಂತರ ಮಳೆ ಸುರಿದು ಸಿಲಿಕಾನ್ ಸಿಟಿ ಸೇರಿ ಹಲವು ಜಿಲ್ಲೆಗಳಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಅದೆಷ್ಟೋ ಮಂದಿ ಸೂರು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಅನ್ನ, ನೀರಿಲ್ಲದೆ ಇನ್ನೆಷ್ಟೋ ಮಂದಿ ಪರದಾಡುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫುಲ್ ಅಲರ್ಟ್ ಆಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದಲೇ ಡಿಸಿಗಳ ಜೊತೆ ಬೊಮ್ಮಾಯಿ ಸಭೆ ನಡೆಸಲಿದ್ದಾರೆ..ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ, ಮಳೆ ಅನಾಹುತದ ಕುರಿತು ಮಾಹಿತಿ ಪಡೆಯಲಿದ್ದಾರೆ. ಜೊತೆಗೆ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಲು ಡಿಸಿ, ಸಿಇಒಗಳಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಲಿದ್ದಾರೆ.