Select Your Language

Notifications

webdunia
webdunia
webdunia
webdunia

ಸಿಎಂಗೆ ಮಾನ ಮರ್ಯಾದೆ ಇದ್ರೆ ಜಾರ್ಜ್ ರಾಜೀನಾಮೆ ಪಡೆಯಲಿ: ಕುಮಾರಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 18 ಜುಲೈ 2016 (17:14 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನ ಮರ್ಯಾದೆ ಇದ್ದರೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನ ಮರ್ಯಾದೆ ಇದ್ದರೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಲಿ ಎಂದು ಹೇಳಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಕುಟುಂಬ ಸದಸ್ಯರಿಗೆ ಕಾನೂನು ವ್ಯಾಪ್ತಿಯಲ್ಲಿ ಹೋರಾಟ ನಡೆಸುವಂತೆ ಸಲಹೆ ನೀಡಿದ್ದೆ ಎಂದು ತಿಳಿಸಿದರು. 
 
ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ಅವರು ತನಗೆ ಕಿರುಕುಳ ನೀಡತ್ತಿದ್ದಾರೆ. ನನಗೆನಾದ್ರೂ ಆದ್ರೆ ಈ ಮೂವರೇ ಕಾರಣ ಎಂದು ಆರೋಪಿಸಿದ್ದರು.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಗಣಪತಿ ಪ್ರಕರಣ; ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇನೆ ಎಂದ ಸಚಿವ ಜಾರ್ಜ್