Select Your Language

Notifications

webdunia
webdunia
webdunia
webdunia

ನೆರೆ ರಾಜ್ಯಗಳಲ್ಲಿ ಒಮಿಕ್ರಾನ್ ಹೆಚ್ಚಳ: ನಾಳೆ ಬೆಳಿಗ್ಗೆ ಸಭೆ ಕರೆಯಲಾಗಿದೆ ಎಂದ ಸಿಎಂ ಬೊಮ್ಮಾಯಿ

ನೆರೆ ರಾಜ್ಯಗಳಲ್ಲಿ ಒಮಿಕ್ರಾನ್ ಹೆಚ್ಚಳ: ನಾಳೆ ಬೆಳಿಗ್ಗೆ ಸಭೆ ಕರೆಯಲಾಗಿದೆ ಎಂದ ಸಿಎಂ ಬೊಮ್ಮಾಯಿ
bangalore , ಸೋಮವಾರ, 27 ಡಿಸೆಂಬರ್ 2021 (19:24 IST)
ರಾಜ್ಯದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಆತಂಕ ಶುರುವಾಗಿದ್ದು, ಇದರ ಜೊತೆಗೆ ರಾಜ್ಯ ಸರ್ಕಾರ ಹೊಸ ವರ್ಷ ಆಚರಣೆಗೆ ಒಪ್ಪಿಗೆ ಸೂಚಿಸಿದ್ದು, ಆದರೆ ಸಾರ್ವಜನಿಕವಾಗಿ ಆಚರಣೆಗೆ ನಿರ್ಬಂಧ ವಿಧಿಸಿದೆ.
ಇದರ ಜೊತೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕೂಡ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಅವರು, ರಾಜ್ಯ ಸರ್ಕಾರದ ಗೈಡ್ ಲೈನ್ಸ್ ಅನುಸಾರವೇ ಡಿಸೆಂಬರ್ 31ರಂದು ಹೊಸ ವರ್ಷಾಚರಣೆಯನ್ನು ಆಚರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷ ಆಚರಣೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಬೆಂಗಳೂರು ನಗರದ ಹೋಟೆಲ್, ಪಬ್ ಸೇರಿದಂತೆ ಯಾವುದೇ ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲು ಅವಕಾಶವಿಲ್ಲ. ಬುಕ್ಕಿಂಗ್ ಇದ್ದವರಿಗೆ ಮಾತ್ರವೇ ಹೋಟೆಲ್, ಪಬ್ ಗಳಿಗೆ ಎಂಟ್ರಿ ನೀಡಬೇಕು. ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ, ಸಂಪೂರ್ಣ ಲಸಿಕೆ ಪಡೆದಿರುವಂತ ಪ್ರಮಾಣ ಪತ್ರ ಕಡ್ಡಾಯವಾಗಿದೆ ಎಂದರು.
ಡಿ. 31ರಂದು ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬ್ರಿಗೇಡ್, ಎಂಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. . ಒಂದು ವೇಳೆ ಈ ಎಲ್ಲಾ ನಿಯಮವನ್ನು ಮೀರಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರಳತೆ ಮೆರೆದ ಎಂ. ಎಲ್. ಸಿ. ಶಾಂತರಾಮ್ ಸಿದ್ದಿ