Publish Date: Thu, 06 Feb 2020 (07:42 IST)
Updated Date: Thu, 06 Feb 2020 (07:44 IST)
ಬೆಂಗಳೂರು : ಕೊನೆಗೂ ಸಿಎಂ ಯುಡಿಯೂರಪ್ಪ ಅವರು 10 ಮಂದಿ ನೂತನ ಸಚಿವರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಸಚಿವರ ಅಧಿಕೃತ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದಾರೆ.
ಉಪಚುನಾವಣೆಯಲ್ಲಿ ಗೆದ್ದ ಮಹೇಶ್ ಕುಮಟಳ್ಳಿ ಅವರನ್ನು ಬಿಟ್ಟು ಉಳಿದ 10 ಮಂದಿ ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಲಾಗಿದೆ. ಅದರಂತೆ ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಭೈರತಿ ಬಸವರಾಜ್, ಆನಂದ್ ಸಿಂಗ್, ಸುಧಾಕರ್, ಶಿವರಾಮ್ ಹೆಚ್ಚಾರ್, ಬಿ.ಸಿ.ಪಾಟೀಲ್, ಗೋಪಾಲಯ್ಯ, ನಾರಾಯಣಗೌಡ, ಹಾಗೂ ಶ್ರೀಮಂತ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಪೊಲೀಸರ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.