Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ

ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ
ಬೆಂಗಳೂರು , ಶುಕ್ರವಾರ, 7 ಅಕ್ಟೋಬರ್ 2022 (08:49 IST)
ಬೆಂಗಳೂರು : ನಾಗರಹೊಳೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಮರಿಯಾನೆಗೆ ಸೂಕ್ತ ಚಿಕಿತ್ಸೆ ನೀಡಿ ಎಂದು ಮನವಿ,

ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಪ್ರತಿಕ್ರಿಯಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ಅವರ ಕಾಳಜಿಯನ್ನು ಪ್ರಶಂಸಿದ್ದಾರೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತನಾಡಿ ಮರಿ ಆನೆಯ ಬಗ್ಗೆ ವಿಚಾರಿಸಲಾಗಿದೆ.

ಕಾಡುಪ್ರಾಣಿಯ ದಾಳಿಯಿಂದಾಗಿ ಈ ರೀತಿಯ ತೊಂದರೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೂ ಗಾಯಾಳು ಆನೆಮರಿಯ ರಕ್ಷಣೆಗೆ ಎಲ್ಲ ರೀತಿಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ!