Select Your Language

Notifications

webdunia
webdunia
webdunia
webdunia

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿಕೆ ವಿರುದ್ಧ ಸಿಎಂ ಪರೋಕ್ಷ ವಾಗ್ದಾಳಿ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿಕೆ ವಿರುದ್ಧ ಸಿಎಂ ಪರೋಕ್ಷ ವಾಗ್ದಾಳಿ
ಬೆಂಗಳೂರು , ಶುಕ್ರವಾರ, 19 ಮೇ 2017 (14:57 IST)
ಹಿಂದೆ ಅಧಿಕಾರದಲ್ಲಿದ್ದವರು ಮುಂದಾಲೋಚನೆ ಯೋಚನೆಯಿಲ್ಲದೇ 110 ಹಳ್ಳಿಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿ ಕೈ ತೊಳೆದುಕೊಂಡಿದ್ದಾರೆ. ಇದೀಗ ಸಮಸ್ಯೆಯನ್ನು ನಾವು ಅನುಭವಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
 
ಲಗ್ಗೆರೆ ವಾರ್ಡ್‌ನಲ್ಲಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ಇನ್ನು ಒಂದು ವರ್ಷ ಅಧಿಕಾರದಲ್ಲಿ ಇರುತ್ತೇವೆ. ಕಳೆದ ನಾಲ್ಕು ವರ್ಷಗಳಲ್ಲಿ ನಾವು ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದ್ದಾರೆ.
 
ಆದ್ರೆ ವಿಪಕ್ಷಗಳು ವಿನಾಕಾರಣ ಸರಕಾರವನ್ನು ಟೀಕಿಸುತ್ತಿದೆ. ವಿಪಕ್ಷಗಳನ್ನು ನೋಡಿದಲ್ಲಿ ಗಾದೆ ನೆನಪಾಗುತ್ತದೆ. ಕೈಲಾಗದವನು ಮೈ ಪರಚಿಕೊಂಡ ಎನ್ನುವ ಗಾದೆ ನೆನಪಾಗುತ್ತದೆ ಎಂದು ವ್ಯಂಗ್ಯವಾಡಿದರು.
 
ಬೆಂಗಳೂರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಹೆಸರಿದೆ. ಅದನ್ನು ಉಳಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದಲಿತರ ಮನೆಯಲ್ಲಿ ಹೋಟೆಲ್ ಉಪಹಾರ ಸೇವಿಸಿದ ಬಿಎಸ್‌ವೈ: ಕಾಂಗ್ರೆಸ್ ಲೇವಡಿ