ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದ ಹಾಗೇ ಸಿಎಂ ಬದಲಾವಣೆ ಚರ್ಚೆ ಭಾರೀ ಜೋರಾಗಿಯೇ ನಡೆಯುತ್ತಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳಿಸಿದ್ದು ಅವರ ಜತೆ 7 ಶಾಸಕರು ತೆರಳಿದ್ದಾರೆ.
ಚಲುವರಾಯಸ್ವಾಮಿ ದೆಹಲಿಗೆ ಹೋಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ದಾಳ ಪ್ರಯೋಗಿಸಿದ್ದು ನಾಳೆ ತುರ್ತು ಕೃಷಿ ಸಚಿವರ ಸಭೆಯನ್ನು ಕರೆದಿದ್ದಾರೆ.
ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುವ ಸಚಿವರು ಹಾಗೂ ಶಾಸಕರು ಶಕ್ತಿ ಪ್ರದರ್ಶನ ಮಾಡಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಣದ ನಾಯಕತ್ವವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ವಹಿಸಿಕೊಂಡಿದ್ದಾರೆ.
ಚಲುವರಾಯಸ್ವಾಮಿ ದೆಹಲಿಗೆ ಹೋದ ಬೆನ್ನಲ್ಲೇ ಸಿಎಂ ಅಲರ್ಟ್ ಆಗಿದ್ದಾರೆ. ಮೈಸೂರಿನಲ್ಲಿ ವಾಸ್ತವ್ಯ ಹೂಡಬೇಕಿದ್ದ ಸಿಎಂ ಸಿದ್ದರಾಮಯ್ಯ ಅವರು ದಿಡೀರ್ ವಾಸ್ತವ್ಯವನ್ನು ರದ್ದು ಮಾಡಿದ್ದಾರೆ.
ಶುಕ್ರವಾರ ಬೆಳಗ್ಗೆ 10:30ಕ್ಕೆ ಕಾವೇರಿ ನಿವಾಸದಲ್ಲಿ ಕೃಷಿ ಸಚಿವರ ಜೊತೆ ಮೆಕ್ಕೆಜೋಳ ಖರೀದಿಸುವ ಸಂಬಂಧ ತುರ್ತು ಸಭೆ ಕರೆದಿದ್ದು ಸೂಚನಾ ಪತ್ರ ಹೊರಡಿಸಿದ್ದಾರೆ.
ಈಗಾಗಲೇ ಡಿಕೆಶಿ ಬಣದ ಬೆಂಬಲಿಗರ ನಾಯಕತ್ವ ಹೊತ್ತಿರುವ ಚಲುವರಾಯ ಸ್ವಾಮಿ ಸಿಎಂ ಮಾತಿಗೆ ಬೆಲೆ ನೀಡಿ ದೆಹಲಿಯಿಂದ ಮತ್ತೆ ಬೆಂಗಳೂರಿಗೆ ಮರಳುತ್ತಾರೋ? ಇಲ್ವೋ ಎನ್ನುವ ಕುತೂಹಲ ಹೆಚ್ಚಾಗಿದೆ.