Publish Date: Sat, 05 Aug 2023 (13:40 IST)
Updated Date: Sat, 05 Aug 2023 (13:49 IST)
ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ ವೇದಿಕೆ ಮೇಲೆ
10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ ನೀಡಲಿದ್ದಾರೆ. ಗೃಹ ಜೋತಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಕಲಬುರಗಿ ನಗರದಲ್ಲಿ ಇಂಧನ ಇಲಾಖೆ ಆಯೋಜಿಸಿದೆ. ಉಚಿತ ಬೆಳಕು, ಸುಸ್ಥಿರ ಬದುಕು ಎಂಬ ಘೋಷವಾಕ್ಯದೊಂದಿಗೆ ಬೆಳಗ್ಗೆ 11 ಗಂಟೆಗೆ, ನಗರದ NV ಮೈದಾನದಲ್ಲಿ ಗೃಹ ಜೋತಿ ಯೋಜನೆ ಅಧಿಕೃತವಾಗಿ ಜಾರಿಯಾಗಲಿದೆ. ಇನ್ನು ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.