ಬೆಂಗಳೂರು :ಕರ್ನಾಟಕ ಬಜೆಟ್ 2024 ರಲ್ಲಿ ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಸತಿ ಕ್ಷೇತ್ರಕ್ಕೆ ಪ್ರಸಕ್ತ ಬಜೆಟ್ ನಲ್ಲಿ ನೀಡಲಾಗಿರುವ ಕೊಡುಗೆಗಳು ಹೀಗಿವೆ
• 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ . ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಸಮೀಕ್ಷೆ .
• ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಾಣ. ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ಸರ್ಕಾರದ ತೀರ್ಮಾನ. ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರ.
• ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮ
• Asset Monetisation, ವಸತಿ ಸೆಸ್ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪನೆ.
• ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ
• ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜನೆ
• ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ