ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ 5 ಸಾವಿರ ಕೋಟಿ ರೂಪಾಯಿ ಸಂಗ್ರಹ ಮಾಡಿದ್ದಾರೆ ಎಂದಿರುವ ಕಾಂಗ್ರೆಸ್ ಆರೋಪಕ್ಕೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಬಿ.ವೈ.ವಿಜಯೇಂದ್ರ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ ಗಂಭೀರ ಆರೋಪ ಮಾಡಿ ಪತ್ರ ಬಿಡುಗಡೆಗೊಳಿಸಿದ್ದರು.
ಇದಕ್ಕೆ ಬಿ.ವೈ.ವಿಜಯೇಂದ್ರ ಅವರು ಟ್ವೀಟ್ ಮಾಡಿ ಟಾಂಗ್ ನೀಡಿದ್ದಾರೆ.
ಕಟ್ಟು ಕಥೆ ಕಟ್ಟುವುದರಲ್ಲಿ , ಹಸೀ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಜೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶ ಪೂರಿತ,ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು.
ಹೀಗಂತ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.