Publish Date: Wed, 12 Oct 2022 (15:26 IST)
Updated Date: Wed, 12 Oct 2022 (15:28 IST)
ಬೆಂಗಳೂರು : ಮುಂದಿನ ವಾರಾಂತ್ಯದಲ್ಲಿ ದೆಹಲಿಗೆ ಭೇಟಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ.
ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಹಳ ತಿಂಗಳ ಬಳಿಕ ದೆಹಲಿಗೆ ಸಿಎಂ ಭೇಟಿ ನೀಡಲಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ನವೆಂಬರ್ 10 ರಂದು ಕೆಂಪೇಗೌಡರ 108 ಅಡಿ ಉದ್ದದ ಪ್ರತಿಮೆ ಉದ್ಘಾಟನೆಯಿದ್ದು, ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಿದ್ದಾರೆ. ಇದೇ ವೇಳೆ ಅಮಿತ್ ಶಾ, ಜೆ.ಪಿ.ನಡ್ಡಾ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.