Select Your Language

Notifications

webdunia
webdunia
webdunia
webdunia

ಕುಂದಾನಗರಿಗೆ ಸಿಎಂ ಭೇಟಿ ಇಂದು: ಸಂಚಲನ ಮೂಡಿಸಿದ ಭವಿಷ್ಯದ ಮುಖ್ಯಮಂತ್ರಿ ಬ್ಯಾನರ್

Chief Minister Siddaramaiah

Sampriya

ಬೆಳಗಾವಿ , ಭಾನುವಾರ, 13 ಅಕ್ಟೋಬರ್ 2024 (10:39 IST)
Photo Courtesy X
ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಈ  ಹೊತ್ತಿನಲ್ಲೇ ಕುಂದಾನಗರಿಯಲ್ಲಿ ಸತೀಶ್‌ ಜಾರಕಿಹೋಳಿ ಅಭಿಮಾನಿಗಳು ಹಾಕಿರುವ ಬ್ಯಾನರ್‌ ಭಾರೀ ಸಂಚಲನ ಮೂಡಿಸಿದೆ.

ಇಂದು ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಈ ಹೊತ್ತಿನಲ್ಲೇ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾವಚಿತ್ರ ಇರೋ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ಆ ಬ್ಯಾನರ್‌ನಲ್ಲಿ ಜಾರಕಿಹೊಳಿ ಭಾವಚಿತ್ರದ ಕೆಳಗೆ ಭವಿಷ್ಯದ ಮುಂದಿನ ಮುಖ್ಯಮಂತ್ರಿ ಎಂದು ಬರೆಯಲಾಗಿದೆ. ಜೊತೆಗೆ ಉಳಿದ ಸಹೋದರರು ಹಾಗೂ ಅವರ ಮಕ್ಕಳ ಭಾವಚಿತ್ರಗಳನ್ನು ಬ್ಯಾನರ್‌ನಲ್ಲಿ ಹಾಕಿಸಲಾಗಿದೆ.

ಬ್ಯಾನರ್‌ನಲ್ಲಿ ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಭೀಮಶಿ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯ ಲಖನ್ ಜಾರಕಿಹೊಳಿ, ಸತೀಶ್ ಪುತ್ರಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಪುತ್ರ ರಾಹುಲ್ ಜಾರಕಿಹೊಳಿ ಅವರ ಭಾವಚಿತ್ರಗಳನ್ನು ಹಾಕಲಾಗಿದೆ.

ಕೆಲ ದಿನಗಳಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿದೆ. ಈ ಮಧ್ಯೆ ಸತೀಶ್‌ ಜಾರಕಿಹೋಳಿ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದು, ಕುತೂಹಲ ಕೆರಳಿಸಿತ್ತು. ನಂತರದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಎಚ್‌.ಸಿ. ಮಹದೇವಪ್ಪ ಅವರನ್ನು ಭೇಟಿಯಾದ ಬೆನ್ನಲ್ಲೇ ದಲಿತ ಸಿಎಂ ಕೂಗು ಜೋರಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಂತಾಗಿದೆ ಮಂಗಳೂರು: ಟ್ರಾಫಿಕ್‌ನಲ್ಲಿ ಸುಸ್ತು