ಕುಂದಾನಗರಿಗೆ ಸಿಎಂ ಭೇಟಿ ಇಂದು: ಸಂಚಲನ ಮೂಡಿಸಿದ ಭವಿಷ್ಯದ ಮುಖ್ಯಮಂತ್ರಿ ಬ್ಯಾನರ್

Sampriya
ಭಾನುವಾರ, 13 ಅಕ್ಟೋಬರ್ 2024 (10:39 IST)
Photo Courtesy X
ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಈ  ಹೊತ್ತಿನಲ್ಲೇ ಕುಂದಾನಗರಿಯಲ್ಲಿ ಸತೀಶ್‌ ಜಾರಕಿಹೋಳಿ ಅಭಿಮಾನಿಗಳು ಹಾಕಿರುವ ಬ್ಯಾನರ್‌ ಭಾರೀ ಸಂಚಲನ ಮೂಡಿಸಿದೆ.

ಇಂದು ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಈ ಹೊತ್ತಿನಲ್ಲೇ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾವಚಿತ್ರ ಇರೋ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ಆ ಬ್ಯಾನರ್‌ನಲ್ಲಿ ಜಾರಕಿಹೊಳಿ ಭಾವಚಿತ್ರದ ಕೆಳಗೆ ಭವಿಷ್ಯದ ಮುಂದಿನ ಮುಖ್ಯಮಂತ್ರಿ ಎಂದು ಬರೆಯಲಾಗಿದೆ. ಜೊತೆಗೆ ಉಳಿದ ಸಹೋದರರು ಹಾಗೂ ಅವರ ಮಕ್ಕಳ ಭಾವಚಿತ್ರಗಳನ್ನು ಬ್ಯಾನರ್‌ನಲ್ಲಿ ಹಾಕಿಸಲಾಗಿದೆ.

ಬ್ಯಾನರ್‌ನಲ್ಲಿ ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಭೀಮಶಿ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯ ಲಖನ್ ಜಾರಕಿಹೊಳಿ, ಸತೀಶ್ ಪುತ್ರಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಪುತ್ರ ರಾಹುಲ್ ಜಾರಕಿಹೊಳಿ ಅವರ ಭಾವಚಿತ್ರಗಳನ್ನು ಹಾಕಲಾಗಿದೆ.

ಕೆಲ ದಿನಗಳಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿದೆ. ಈ ಮಧ್ಯೆ ಸತೀಶ್‌ ಜಾರಕಿಹೋಳಿ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದು, ಕುತೂಹಲ ಕೆರಳಿಸಿತ್ತು. ನಂತರದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಎಚ್‌.ಸಿ. ಮಹದೇವಪ್ಪ ಅವರನ್ನು ಭೇಟಿಯಾದ ಬೆನ್ನಲ್ಲೇ ದಲಿತ ಸಿಎಂ ಕೂಗು ಜೋರಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments