Publish Date: Tue, 18 Dec 2018 (16:47 IST)
Updated Date: Tue, 18 Dec 2018 (16:48 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕಾಂಗ್ರೆಸ್ ನತ್ತ ಸಿಎಂ ಬೊಟ್ಟು ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಹೇಳಿದಾಗ ಸಂಪುಟ ವಿಸ್ತರಣೆ ಮಾಡೋದಾಗಿ ಸಿಎಂ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಯಾವ ಸಮದಯಲ್ಲಿ ಎಂದು ಹೇಳುತ್ತಾರೋ ಆಗ ಸಚಿವ ಸಂಪುಟ ವಿಸ್ತರಣೆ ಮಾಡಲು ಸಿದ್ಧನಿದ್ದೇನೆ. ಹೀಗಂತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಡಿ. 22 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅದೇ ರೀತಿ ಸಂಪುಟ ವಿಸ್ತರಣೆ ಮಾಡಲು ತಾವು ಸಿದ್ಧವಿರುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕಾಂಗ್ರೆಸ್ ಶಾಸಕರು ಗೈರು ಆಗಿರುವ ವಿಚಾರದ ಬಗ್ಗೆ ತಮಗೆ ಮಾಹಿತಿ ಇಲ್ಲ. ಆದರೆ ಕಾಂಗ್ರೆಸ್ ನವರು ಹೇಳಿದ ದಿನದಂದು ಸಂಪುಟ ವಿಸ್ತರಣೆಗೆ ಸಿದ್ಧವಿರುವುದಾಗಿ ಸಿಎಂ ಹೇಳಿದರು.