ದೆಹಲಿ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು

Webdunia
ಸೋಮವಾರ, 15 ಮೇ 2023 (16:46 IST)
ಕಾಂಗ್ರೆಸ್​​ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೂ ಸಹ ಸಿಎಂ ಆಯ್ಕೆ ಫೈನಲ್​ ಆಗಿಲ್ಲ.. ಕಾಂಗ್ರೆಸ್​​​​​​​ ಸರ್ಕಾರ ರಚನೆಗೆ ಸಿಎಂ ಆಯ್ಕೆ ತೊಡಕಾಗಿ ಪರಿಣಮಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K. ಶಿವಕುಮಾರ್​​​​ ನಡುವೆ ಸಿಎಂ ಗಾದಿಗಾಗಿ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಹೊಸ ಸಿಎಂ ಪದಗ್ರಹಣ ವಿಳಂಬವಾಗ್ತಿದೆ.. ನಿನ್ನೆ ಮಧ್ಯರಾತ್ರಿವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. AICC ವೀಕ್ಷಕರು ಶಾಸಕರ ಅಭಿಪ್ರಾಯವನ್ನ AICC ಅಧ್ಯಕ್ಷ ಮಲ್ಲಿಕಾರ್ಜುನ್​​​​ ಖರ್ಗೆಗೆ ರವಾನಿಸಿದ್ದಾರೆ. ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕಾಂಗ್ರೆಸ್​​ ನಾಯಕರಾದ ರಾಹುಲ್​ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಶಾಸಕರ ಅಭಿಪ್ರಾಯವನ್ನು ತಿಳಿಸಲಿದ್ದಾರೆ. ಶಾಸಕರ ಅಭಿಪ್ರಾಯ ಪರಿಗಣಿಸಿ, ಕಾಂಗ್ರೆಸ್​​ ಹೈಕಮಾಂಡ್​​​ ಇಂದು ಅಥವಾ ನಾಳೆ ಸಿಎಂ ಹೆಸರು ಘೋಷಣೆ ಮಾಡಲಿದ್ದಾರೆ. ಗುರುವಾರ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ ಇದೆ. ಸಿಎಂ ಜೊತೆ 12-15 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments