Select Your Language

Notifications

webdunia
webdunia
webdunia
webdunia

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

CM Siddaramaiah

Sampriya

ಬೆಂಗಳೂರು , ಗುರುವಾರ, 20 ನವೆಂಬರ್ 2025 (18:55 IST)
ಬೆಂಗಳೂರು: ನಾನು ಜೆಡಿಎಸ್‌ನಲ್ಲಿ ರಾಜಕೀಯ ಭವಿಷ್ಯ ಮುಂದುವರೆದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಇಂದು ಹೇಳಿದರು.

ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಈ ಕುರಿತು ಸಿದ್ದರಾಮಯ್ಯ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದು ಹೇಳಿದರು. 

ಇನ್ನೂ ಚಾಮರಾಜನಗರಕ್ಕೆ ಬಂದರೆ ಸಿಎಂ ಸ್ಥಾನ ಹೋಗುತ್ತದೆ ಅನ್ನೋ ಮೌಢ್ಯ ಪ್ರಚಲಿತದಲ್ಲಿ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿಯಾಗಿದೆ. 

ಸಿಎಂ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. 

ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌